
ಪ್ರಗತಿವಾಹಿನಿ ಸುದ್ದಿ: ನಸುಕಿನಜಾವ ಏಕಾಏಕಿ ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ 9 ತಿಂಗಳ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 18 ಜನರು ಗಾಯಗೊಂಡಿದ್ದಾರೆ.
ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ. ಈಶಾನ್ಯ ದೆಹಲಿಯ ದಯಾಲ್ ಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




