Karnataka NewsNationalPolitics

*BREAKING: ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಲವು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸುದ್ದಿಗೋಷ್ಠಿ ದಿಢೀರ್ ರದ್ದಾಗಿದೆ.

ಕ್ಷೇತ್ರ ಪುನರ್ವಿಂಗಡಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ದಕ್ಷಿಣ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳ ಜಂಟಿ ಸುದ್ದಿಗೋಷ್ಠಿ ನಿಗದಿಯಾಗಿತ್ತು. ಸಿಎಂ ಡಿ.ಕೆ.ಶಿವಕುಮಾಅರ್ ಕೂಡ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುವವರಿದ್ದರು. ಆದರೆ ಕೊನೆ ಕ್ಷಣದಲ್ಲಿ ಸಿಎಂಗಳ ಜಂಟಿ ಸುದ್ದಿಗೋಷ್ಠಿ ರದ್ದಾಗಿದೆ.

ಕಾಂಗ್ರೆಸ್ ನ ಎಲ್ಲಾ ವರಿಷ್ಠರು ಹಾಗೂ ಲೋಕಸಭಾ ವಿಪಕ್ಷನಾಯಕ ರಾಹುಲ್ ಗಾಂಧಿ ಚೆನ್ನೈಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡುವ ನಿಟ್ಟಿನಲ್ಲಿ ಚೆನ್ನೈಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ರದ್ದಾಗಿದೆ ಎಂದು ತಿಳಿದುಬಂದಿದೆ.

Related Articles

Back to top button