National

*ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರಮಣವಚನ ಸ್ವೀಕಾರ ಸಮಾರಂಭದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ, ಪ್ರಮಾಣವಚನ ಬೋಧಿಸಿದರು. ರೇಖಾ ಗುಪ್ತಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರೇಖಾ ಗುಪ್ತಾ ಜೊತೆಗೆ ಆರು ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಪುಟ ಸಚಿವರು, ಎನ್ ಡಿಎ ಮೈತ್ರಿ ಕೂಟದ ನಾಯಕರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button