*ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ದಟ್ಟ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ದೆಹಲಿಯ ವಿಕಾಸ್ ಮಾರ್ಗದಲ್ಲಿರುವ ಸಚಿವಾಲಯದ ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಎಂಟು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.Home add -Advt ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿದ್ದಾರೆ. *ಸುಗಂಧರಾಜ ಹೂವಿನ ಹಾರ ಹಾಕಬೇಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*