ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಬಹುದೊಡ್ಡ ಹೊಡೆತ ಬಿದ್ದಿದೆ. ಆಪ್ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆ ಹಿಡಿಯಲಿದೆ.
ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಪ್ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನುಭವಿಸಿದ್ದಾರೆ. ಬಿಜೆಪಿಯ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದಾರೆ.
ಪಕ್ಷ ಹಾಗೂ ತಮ್ಮ ಸೋಲಿನ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಮ್ಮ ಸೋಲೊಪ್ಪಿಕೊಂಡಿದ್ದಾರೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದಿದೆ. ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದೆ. ದೆಹಲಿ ಮಹಾಜನತೆಯ ತೀರ್ಪನ್ನು ಹೃದಯಪೂರ್ವಕವಾಗಿ ಸ್ವೀಕರಿಸುತ್ತೇನೆ ಎಂದು ತಿಳಿಸಿದ್ದಾರೆ. 10 ವರ್ಷಗಳ ಕಾಲ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ಮುಂದಿನ ದಿನಗಳಲ್ಲಿಯೂ ಜನಪರ ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ