National

*ಬೇಬಿ ಕೇರ್ ಸೆಂಟರ್ ನಲ್ಲಿ ಅಗ್ನಿ ದುರಂತ; 7 ನವಜಾತ ಶಿಶುಗಳು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಗೇಮಿಂಗ್ ಝೋನ್ ನಲ್ಲಿ ಅಗ್ನಿ ದುರಂತ ಸಂಭವಿಸಿದ ಬೆನ್ನಲ್ಲೇ ದೆಹಲಿಯ ಬೇಬಿ ಕೇರ್ ಸೆಂಟರ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 7 ಮಕ್ಕಳು ಸಜೀವದಹನಗೊಂಡಿದ್ದಾರೆ.

ದೆಹಲಿಯ ವಿವೇಕ್ ವಿಹಾರ್ ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ತಡರಾತ್ರಿ 11:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 9 ಅಗ್ನಿಶಾಮಕ ದಳಗಳು ಸ್ಥಳಕ್ಕಾಗಮಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿವೆ. ಆದರೆ ಶಿಶುಪಾಲನಾ ಕೇಂದ್ರದಲ್ಲಿದ್ದ 6 ನವಜಾತ ಶಿಶುಗಳು ಮೃತಪಟ್ಟಿವೆ. 5 ಶಿಶುಗಳ ಸ್ಥಿತಿ ಗಂಭೀರವಾಗಿವೆ.

ಆಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ಇಲಾಖೆ ಹಾಗೂ ಪೊಲೀಸರು ತನಿಖೆ ನಡೆಸಿದ್ದಾರೆ.


Related Articles

Back to top button