ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಜ್ರಿವಾಲ್, ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸೋಂಕು ನಿಯಂತ್ರಣಕ್ಕೆ ಈಗಾಗಲೇ 6 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿದ್ದು ನಾಳೆ ಬೆಳಿಗ್ಗೆ 6 ಗಂಟೆಗೆ ಈ ಲಾಕ್ ಡೌನ್ ಅವಧಿ ಮುಗಿಯಲಿದೆ. ಆದರೆ ಈ ನಡುವೆ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ನ್ನು ಮತ್ತೆ 1 ವಾರ ಕಾಲ ವಿಸ್ತರಿಸಲಾಗಿದೆ ಎಂದರು.
ದೆಹಲಿಯಲ್ಲಿ ನಿನ್ನೆ ದಿನ 24,000 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆಯಾಗಿತ್ತು. ಅಲ್ಲದೇ ಒಂದೇ ದಿನದಲ್ಲಿ 357 ಜನ ಸೋಂಕಿಗೆ ಬಲಿಯಾಗಿದ್ದರು. ಈ ನಡುವೆ ದೆಹಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಆರಂಭವಾಗಿದ್ದು, ರೋಗಿಗಳ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಮತ್ತೊಂದು ಆಕ್ಸಿಜನ್ ಟ್ಯಾಂಕ್ ದುರಂತ; 27 ರೋಗಿಗಳು ಸಜೀವ ದಹನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ