ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೂ ಇನ್ನೂ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕೇಜ್ರಿವಾಲ್, ಲಾಕ್ ಡೌನ್ ಜಾರಿಯಿಂದಾಗಿ ರಾಜ್ಯದಲ್ಲಿ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದೆ. ಪಾಸಿಟಿವ್ ಕೇಸ್ ಗಳು ಕಡಿಮೆಯಾಗಿವೆ. ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜನರ ಹಿತದೃಷ್ಟಿಯಿಂದ ಮೇ 31ರವವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಇಂದು ಹೊಸದಾಗಿ 1600 ಜನರಲ್ಲಿ ಮಾತ್ರ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದರೆ ಮೇ 31ರ ಬಳಿಕ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ನಡೆಸುವುದಾಗಿ ತಿಳಿಸಿದರು.
ರೆಮ್ ಡಿಸಿವಿರ್ ಕಾಳದಂಧೆಕೋರರಿಗೆ ಬಿತ್ತು ಕಡಿವಾಣ! ಹೇಗೆ ನೋಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ