*ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಧಿಕಾರಿಯೇ ತನ್ನ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಅಧಿಕಾರಿ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ದೆಹಲಿ ಪೊಲೀಸರು ಆರೊಪಿ ಅಧಿಕಾರಿಯನ್ನು ಹಾಗೂ ಆತನ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ.
2020ರಲ್ಲಿ ಬಾಲಕಿಯ ತಂದೆ ಸಾವನ್ನಪ್ಪಿದ್ದರು. ತಂದೆಯ ಸ್ನೇಹಿತನಾಗಿದ್ದ ಸರ್ಕಾರಿ ಅಧಿಕಾರಿ ಆಗಾಗ ಬಾಲಕಿಯನ್ನು ಭೇಟಿಯಾಗಿ, ಸಮಾಧಾನ ಮಾಡುತ್ತಿದ್ದ. ಹಲವುಬಾರಿ ತನ್ನ ಮನೆಗೂ ಕರೆದೊಯ್ದಿದ್ದ. ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದ ಬಾಲಕಿಯ ಭಾವನಾತ್ಮಕತೆಯನ್ನೇ ದುರುಪಯೋಗಪಡಿಸಿಕೊಂಡ ಅಧಿಕಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. 2021ರ ವೇಳೆಗೆ ಬಾಲಕಿ ಮೇಲೆ ಅಧಿಕಾರಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಪತಿಯ ಕೃತ್ಯಕ್ಕೆ ಆತನ ಪತ್ನಿಯೂ ಸಾಥ್ ನೀಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.
ಸಂತ್ರಸ್ತೆ ಗರ್ಭವತಿಯಾಗಿದ್ದು, ಆಕೆಗೆ ಮಾತ್ರೆಯನ್ನು ನೀಡಿ ಅಧಿಕಾರಿಯ ಪತ್ನಿ ಗರ್ಭಪಾತ ಮಾಡಿಸಿದ್ದಾಳೆ. ತೀವ್ರ ಅನಾರೋಗ್ಯಕ್ಕೀಡಾದ ಬಾಲಕಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ವಿಚಾರಿಸಿದಾಗ ನಡೆದ ಘಟನೆಗಳ ಬಗ್ಗೆ ಬಾಲಕಿ ವಿವರಿಸಿದ್ದಾಳೆ ಎನ್ನಲಾಗಿದೆ. ಸಂತ್ರಸ್ತೆಯ ಇದೀಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಧ್ಯ ಆರೋಪಿಯಾಗಿರುವ ದೆಹಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಸಾಹಕಾರ ನೀಡಿದ್ದಕ್ಕೆ ಆತನ ಪತ್ನಿಯನ್ನೂ ವಶಕ್ಕೆ ಪಡೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ