Kannada NewsLatestNationalPolitics

*ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಸಚಿವ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವರೊಬ್ಬರು ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.

ದೆಹಲಿ ಲೋಕೋಪಯೋಗಿ ಇಲಾಖೆ ಸಚಿವ ಪರ್ವೇಶ್ ವರ್ಮಾ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಮಗಾರಿ ಪರಿಶೀಲನೆ ವೇಳೆ ವ್ಯಕ್ತಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಸಚಿವರು ಮೊದಲು ಮೊಬೈಲ್ ಅನ್ನು ಕೆಳಕ್ಕೆ ತಳ್ಳಿ ಆತನ ಕೆನ್ನೆಗೆ ಭಾರಿಸಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಕೆಲಕಾಲ ಗದ್ದಲ ಉಂಟಾಗಿದ್ದು, ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಘಟನೆಯ ಬಳಿಕ ಪರ್ವೇಶ್ ವರ್ಮಾ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ. ಆ ವ್ಯಕ್ತಿ ತನ್ನ ಕುಟುಂಬದ ಸದಸ್ಯರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರಿಂದ ತಾವು ಪ್ರತಿಕ್ರಿಯಿಸಿದ್ದಾಗಿ ಅವರು ಹೇಳಿದ್ದಾರೆ.

ಈ ಘಟನೆ ವೇಳೆ ಸ್ಥಳದಲ್ಲಿದ್ದ ಎಎಪಿ ಶಾಸಕ ಜರ್ನೈಲ್ ಸಿಂಗ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿದ್ದಾರೆ. ರಸ್ತೆಯ ಮೇಲಿನ ಡಾಂಬರನ್ನು ಕೈಯಿಂದಲೇ ಕಿತ್ತು ತೋರಿಸಿ ಕಾಮಗಾರಿ ಕಳಪೆಯಾಗಿದೆ ಎಂದು ಕಿಡಿಕಾರಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button