NationalPolitics

*ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಪ್ ಶಾಸಕಿ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಡಲಾಗಿದೆ.

ಆಮ್ ಆದ್ಮಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಆತಿಶಿ ಅವರನ್ನು ದೆಹಲಿ ಸಿಎಂ ಆಗಿ ಆಯ್ಕೆ ಮಾಡಲಾಗಿದ್ದು, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಆತಿಶಿ ನೂತನ ಮುಖ್ಯಮಂತ್ರಿ ಎಂದು ಘೋಷಿಸಿದರು.

ದೆಹಲಿಯ ಕಲ್ಕಾಜಿ ಕ್ಷೇತ್ರದ ಶಾಸಕಿಯಾಗಿರುವ ಆತಿಶಿ ದೆಹಲಿಯ ಮುಂದಿನ ಸಿಎಂ ಎಂಬ ಮಾತು ಕಳೆದ ಎರಡು ದಿನಗಳಿಂದ ಕೇಳಿಬಂದಿತ್ತು. ಇದೀಗ ಅತಿಶಿ ಅವರನ್ನೇ ಆಯ್ಕೆ ಮಾಡಲಾಗಿದೆ.

Home add -Advt

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಇಡಿ, ಸಿಬಿಐನಿದ ಬಂಧನಕ್ಕೀಡಾಗಿ ಜೈಲು ಸೇರಿದ್ದ ಅರವಿಂದ್ ಕೇಜ್ರಿವಾಲ್, ಆರು ತಿಂಗಳ ಬಳಿಕ ಬಿಡುಗಡೆಯಾಗಿ ಬಂದಿದ್ದರು. ಇದರ ಬೆನ್ನಲ್ಲೇ ನಿನ್ನೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನೂತನ ಸಿಎಂ ಆಯ್ಕೆ ಮಾಡಲಾಗಿದ್ದು, ಆತಿಶಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

Related Articles

Back to top button