
ಪ್ರಗತಿವಾಹಿನಿ ಸುದ್ದಿ: ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಸಂಭವಿಸಿದ ಪಿಜಿ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಾಂಖ್ಯೆ 7ಕ್ಕೆ ಏರ್ಕೆಯಾಗಿದೆ.
ದುರಂತದಲ್ಲಿ ಈವರೆಗೆ 7 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಕಟ್ಟಡದ ಮಾಲೀಕ ಹರಿರಾಮ್ ಗುಪ್ತಾನನ್ನು ದೆಹಲಿ ಪೊಲೀಸರು ರಾಜಸ್ಥಾನದ ಭಿವಾಡಿಯಲ್ಲಿ ಬಂಧಿಸಿದ್ದಾರೆ.
ಕಟ್ಟಡ ಕುಸಿತದ ನಂತರ ಹರಿರಾಮ್ ಗುಪ್ತಾ ತಲೆಮರೆಸಿಕೊಂಡಿದ್ದರಿಂದ ಆತನ ಪತ್ತೆಗೆ ದೆಹಲಿ ಪೊಲೀಸರು 10 ವಿಶೇಷ ತಂಡಗಳನ್ನು ರಚಿಸಿ, ಲುಕ್ ಔಟ್ ನೋಟಿಸ್ ಹೊರಡಿಸಿದ್ದರು.
ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಬಳಿಯ ಸತ್ಯ ನಿಕೇತನದಲ್ಲಿದ್ದ 50 ವರ್ಷ ಹಳೆಯದಾದ 5 ಅಂತಸ್ತಿನ ಕಟ್ಟಡದಲ್ಲಿ ದುರಸ್ತಿ ಮತ್ತು ನವೀಕರಣ ಕಾಮಗಾರಿ ನಡೆಯುತ್ತಿದ್ದಾಗ ಭಾನುವಾರ ಈ ಕುಸಿತ ಸಂಭವಿಸಿತ್ತು. ಈ ಕಟ್ಟಡವನ್ನು ವಿದ್ಯಾರ್ಥಿಗಳ ಪಿಜಿ ಹಾಸ್ಟೆಲ್ ಆಗಿ ಬಳಸಲಾಗುತ್ತಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸೌತ್ ಕ್ಯಾಂಪಸ್ ಪೊಲೀಸ್ ಠಾಣೆಯಲ್ಲಿ ಮಾಲೀಕ ಹರಿರಾಮ್ ಗುಪ್ತಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಮತ್ತೊಂದೆಡೆ ಇದೇ ಪ್ರಕರಣದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ, ದೆಹಲಿ ಸತ್ಯನಿಕೇತನ ಪ್ರದೇಶದ ಪುರಸಭೆಯ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.




