
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿಯ ಹಲವೆಡೆಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ದೆಹಲಿಯ ಎನ್ ಸಿ ಆರ್ ಪ್ರದೇಶ ಸೇರಿದಂತೆ ವಿವಿಧೆಡೆಗಳಲ್ಲಿ ಭೂ ಕಂಪ ಸಂಭವಿಸಿದೆ. ರಿಕ್ಟರ್ ಮಾಕದಲ್ಲಿ ಭೂಕಂಪದ ತೀವ್ರತೆ 6.2ರಷ್ಟು ದಾಖಲಾಗಿದೆ. ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದೆ ಎಂದು ತಿಳಿದುಬಂದಿದೆ.
ಮಧ್ಯಾಹ್ನದ 2.52ರ ಸುಮಾರಿಗೆ ದೆಹಲಿಯ ಹಲವೆಡೆಗಳಲ್ಲಿ ಭೂಕಂಪ ಸಂಭವಿಸಿದ್ದು, ಜನರು ಮನೆ, ಕಚೇರಿಗಳಿಂದ ಹೊರಗೋಡಿ ಬಂದಿದ್ದಾರೆ. ದೆಹಲಿಯಲ್ಲಿ ಈವರೆಗೆ ಸಂಭವಿಸಿದ ಭೂಕಂಪದ ತೀವ್ರತೆಗಿಂತ ಹೆಚ್ಚು ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳದಲ್ಲಿ ಪತ್ತೆಯಾಗಿದೆ.
ಇನ್ನು ಇದೇ ವೇಳೆ ಉತ್ತರ ಪ್ರದೇಶದ ನೊಯ್ಡಾ, ಪಂಜಾಬ್, ಹರಿಯಾಣ, ಉತ್ತರಾಖಂಡದಲ್ಲಿಯೂ ಭೂಕಂಪ ಸಂಭವಿಸಿದೆ.