ಪ್ರಗತಿವಾಹಿನಿ ಸುದ್ದಿ; ನವದೆಹಲಿ; ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತುರುವುದರಿಂದ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.
ದೆಹಲಿಯಲ್ಲಿ ಪ್ರತಿದಿನ 10 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಗಳು ಪತ್ತೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಎದುರಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸಿದ್ದು, ಶುಕ್ರವಾರ ರಾತ್ರಿ 10ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಅಗತ್ಯ ಸೇವೆ ಹೊರತುಪಡಿಸಿ ಮಾಲ್, ಜಿಮ್, ಸ್ವಿಮಿಂಗ್ ಪೂಲ್ ಎಲ್ಲವೂ ಸಂಪೂರ್ಣ ಬಂದ್ ಆಗಿರಲಿವೆ. ಸಿನಿಮಾ ಥಿಯೇಟರ್ ಗಳಲ್ಲಿ ಶೇ.30ರಷ್ಟು ಜನರಿ ಮಾತ್ರ ಅವಕಾಶ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದರು.
ಬಿಜೆಪಿಗೆ ಶಾಕ್ ಕೊಡುತ್ತಾ ಕಾಂಗ್ರೆಸ್ ಅಂಡರ್ ಕರೆಂಟ್?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ