Belagavi NewsBelgaum NewsKannada NewsKarnataka NewsLatestPolitics

*ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಈಡೇರಿಕೆ; ದೆಹಲಿ-ಬೆಳಗಾವಿ, ಪುಣೆ-ಬೆಳಗಾವಿ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ದೆಹಲಿ ಮತ್ತು ಬೆಳಗಾವಿ ನಡುವೆ ಅಕ್ಟೋಬರ್‌ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಅಕ್ಟೋಬರ್‌ 29 ರಿಂದ ಸ್ಟಾರ್ ಏರ್‌ಲೈನ್ಸ್ ಸಂಸ್ಥೆಯು ಪುಣೆ-ಬೆಳಗಾವಿ ನಡುವೆ ಪ್ರತಿದಿನ ವಿಮಾನಯಾನ ಸಂಚಾರ ಸೇವೆಯನ್ನು ಪ್ರಾರಂಭಿಸಲಿದೆ.

ಅಕ್ಟೋಬರ್‌ 31 ರಿಂದ ಪುಣೆ-ಬೆಳಗಾವಿ ನಡುವೆ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ವಾರದಲ್ಲಿ 3 ದಿನ ( ಮಂಗಳವಾರ, ಗುರುವಾರ ಮತ್ತು ಶನಿವಾರ) ವಿಮಾನಯಾನ ಸಂಚಾರ ಸೇವೆಯನ್ನು ಪ್ರಾರಂಭಿಸಲಿದೆ.

Home add -Advt

ಬೆಳಗಾವಿಯಿಂದ ದೆಹಲಿ ಹಾಗೂ ಪುಣೆ ನಗರಗಳಿಗೆ ವಿಮಾನಯಾನ ಸೇವೆ ಪ್ರಾರಂಭಿಸಿರುವ ಇಂಡಿಗೋ ಮತ್ತು ಸ್ಟಾರ್ ಏರ್‌ಲೈನ್ಸ್ ಸಂಸ್ಥೆಗಳಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button