ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿದ್ದು, ಸಂಭವಿಸಲಿದ್ದ ಭೀಕರ ಅನಾಹುತ ಸ್ವಲ್ಪದರಲ್ಲಿಯೇ ತಪ್ಪಿದ ಘಟನೆ ಈಶಾನ್ಯ ದೆಹಲಿಯ ಘಾಜಿಪುರ ಮಾರುಕಟ್ಟೆಯಲ್ಲಿ ನಡೆದಿದೆ.
ದುಷ್ಕರ್ಮಿಗಳು ಮಾರುಕಟ್ಟೆಯಲ್ಲಿ ಚರ್ಮದ ಬ್ಯಾಗ್ ನಲ್ಲಿ ಸುಧಾರಿತ ಸ್ಫೋಟಕಗಳನ್ನು ಇಟ್ಟು ತೆರಳಿದ್ದಾರೆ. ಅನುಮಾನಾಸ್ಪದ ಬ್ಯಾಗ್ ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬ್ ಪತ್ತೆದಳ ಬ್ಯಾಗ್ ಪರಿಶೀಲನೆ ನಡೆಸಿದ್ದು, ಬ್ಯಾಗ್ ನಲ್ಲಿ ಐಇಡಿ ಸ್ಫೋಟಕಗಳು ಪತ್ತೆಯಾಗಿವೆ. ಬಾಂಬ್ ವಶಪಡಿಸಿಕೊಂಡ ಬಾಂಬ್ ನಿಷ್ಕ್ರಿಯದಳ ಬಾಂಬ್ ನಿಷ್ರಿಯಗೊಳಿಸಿದ್ದು, ಸಂಭವಿಸಲಿದ್ದ ಅನಾಹುತವನ್ನು ತಪ್ಪಿಸಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ