
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಶನಿವಾರ ಹಾಗೂ ಭಾನುವಾರ ದೆಹಲಿ ಸಂಪೂರ್ಣ ಬಂದ್ ಆಗಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಉಳಿದಂತೆ ಶುಕ್ರವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ಜಾರಿಗೆ ಬರಲಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಅನ್ವಯವಾಗಲಿದೆ.
ಇನ್ನು ವಾಣಿಜ್ಯ ಚಟುವಟಿಕೆಗಳಿಗೆ ಶೇ.50ರಷ್ಟು ಅವಕಾಶ ನೀಡಲಾಗಿದ್ದು, ಕಚೇರಿ ಸಿಬ್ಬಂದಿಗಳಿಗೆ ಶೇ.50ರಷ್ಟು ವರ್ಕ್ ಫ್ರಂ ಹೋಂ ಘೋಷಿಸಲಾಗಿದೆ. ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಲಾಗಿದೆ.
ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ 4099 ಹೊಸ ಪ್ರಕರಣ ದಾಖಲಾಗಿದ್ದು, ಪಾಸಿಟಿವಿಟಿ ರೇಟ್ ಶೇ.6.46ಕ್ಕೆ ಏರಿಕೆಯಾಗಿದೆ.
ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ; ಇಂದಿನಿಂದಲೇ ಜಾರಿಯಾಗುತ್ತಾ ಕಠಿಣ ನಿಯಮ?