Kannada NewsKarnataka NewsLatestUncategorized

*ಮಗುವಿಗೆ ಜನ್ಮ ನೀಡಿದ ಕೆಲ ಹೊತ್ತಲ್ಲೇ ತಾಯಿ ಸಾವು*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಮಗುವಿಗೆ ಜನ್ಮ ನೀಡಿದ ಕೆಲ ಸಮಯದಲ್ಲೇ ತಾಯಿ ವಿಪರೀತ ಹೊಟ್ಟೆ ನೋವಿನಿಂದ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

21 ವರ್ಷದ ರಂಜಿತಾ ಬಾಯಿ ಮೃತ ಮಹಿಳೆ. ವೈದ್ಯರ ನಿರ್ಲಕ್ಷವೇ ಮಹಿಳೆ ಸಾವಿಗೆ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಸಖರಾಯಪಟ್ಟಣದ ವಡೇರಹಳ್ಳಿ ತಾಂಡಾದ ರಂಜಿತಾ ಬಾಯಿ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಯಾದ ಕೆಲ ಹೊತ್ತಲ್ಲೇ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಆದಾಗ್ಯೂ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡದೇ ನಿರ್ಲಕ್ಷ ಮಾಡಿದ್ದಾರೆ. ಹೊಟ್ಟೆ ನೋವಿನಿಂದ ನರಳಾಡಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button