ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್ ವೈರಸ್ ನ ಎರಡು ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಖಚಿತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಎರಡು ಪ್ರಕರಣ ಪತ್ತೆಯಾಗಿದೆ. ಈಗಾಗಲೇ ಮೈಸೂರಿನಲ್ಲಿ ಓರ್ವರಲ್ಲಿ ಈ ವೈರಸ್ ಪತ್ತೆಯಾಗಿದ್ದು, ಸೋಂಕಿತನನ್ನು ಐಸೋಲೇಷನ್ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಒಂದು ಕೇಸ್ ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿ ದೊರೆತಿಲ್ಲ ಎನ್ನಲಾಗಿದೆ.
ಡೆಲ್ಟಾ ಪ್ಲಸ್ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಗಮನ ಹರಿಸಿದೆ. ಹೊಸದಾಗಿ 6 ಲ್ಯಾಬ್ ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಇನ್ನು ಮಹಾರಾಷ್ಟ್ರದಲ್ಲಿ 21 ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದ್ದು, ಕೇರಳದಲ್ಲಿ 3, ಮಧ್ಯಪ್ರದೇಶದಲ್ಲಿ ಒಂದು ಸೇರಿದಂತೆ ದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಜನರು ಡೆಲ್ಟಾ ಪ್ಲಸ್ ವೈರಸ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಯುವಕರಿಗೆ ಡೆಂಜರಸ್ ಡೆಡ್ಲಿ ಡೆಲ್ಟಾ ಪ್ಲಸ್…!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ