Belagavi NewsBelgaum NewsKannada NewsKarnataka News

*ಲಿಂಗತ್ವ ಅಲ್ಪಸಂಖ್ಯಾತರಿಗೆ ಕಡ್ಡಾಯ ವೈದ್ಯಕೀಯ ಪರೀಕ್ಷೆ ಕಾನೂನು ಕೈಬಿಡಲು ಒತ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಲು ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ವಿಧೇಯಕವನ್ನು ಹಿಂಪಡೆಯಬೇಕುಬೆಂದು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ  ಸಮಸ್ತ ಬೆಳಗಾವಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಚಳುವಳಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಸಮಸ್ತ ಬೆಳಗಾವಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಚಳುವಳಿಯಿಂದ ಪ್ರತಿಭಟನೆಯನ್ನು ನಡೆಸಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಲು ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯಗೊಳಿಸಿ ಹೊರಡಿಸಿ ವಿಧೇಯಕವನ್ನು ಹಿಂಪಡೆಯಲು ಒತ್ತಾಯಿಸಲಾಯಿತು.  ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.

Home add -Advt

ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಲು ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ. ಆದರೇ ಇದಕ್ಕೆ ಲೈಂಗಿಕ ಅಲ್ಪಸಂಖ್ಯಾತರ ವಿರೋಧವಿದೆ. ಕೂಡಲೇ ಇದನ್ನು ತೊಡೆದು ಹಾಕಬೇಕು. ಬಸ್ಸಿನಲ್ಲಿ ಆಧಾರಕಾರ್ಡ್ ತೋರಿಸಿದರೂ ಉಚಿತ ಪ್ರಯಾಣಕ್ಕೂ ಅನುವು ಮಾಡಿ ಕೊಡುತ್ತಿಲ್ಲ. ಅಲ್ಲಿಯೂ ಕೂಡ ಕಿರಿಕಿರಿ ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Related Articles

Back to top button