ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸುಕ್ಷೇತ್ರ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಜಾತ್ರೆ ಡಿ. 5 ರಿಂದ ಆರಂಭವಾಗಲಿದ್ದು ಇಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಬುಧವಾರ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಕಿರಣ್ ಜಾಧವ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಡಿಸೆಂಬರ್ 5 ರಿಂದ 7 ರವರೆಗೆ ರೇಣುಕಾದೇವಿ ಜಾತ್ರೆ ಆರಂಭವಾಗಲಿದ್ದು ನೆರೆಯ ರಾಜ್ಯ ಮಹಾರಾಷ್ಟ್ರದಿಂದ ಸುಮಾರಾಗಿ 3 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಅವರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿರಣ ಜಾಧವ, ಸವದತ್ತಿ ಯಲ್ಲಮ್ಮನ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಅನೇಕ ಅನಾನುಕೂಲಗಳನ್ನು ಅನುಭವಿಸುತ್ತಾರೆ. ಬಸ್ ನಿಲುಗಡೆ, ನೀರು ಸರಬರಾಜು, ವಸತಿ ವ್ಯವಸ್ಥೆ ಸೇರಿದಂತೆ ಸ್ಥಳದಲ್ಲಿ ಕಸ ಸಂಗ್ರಹಣೆಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಅದರಂತೆ ದೇವಸ್ಥಾನದ ಕ್ಷೇತ್ರದ ಸುಧಾರಣೆಗೆ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.
ಗುಂಬಜ್ ಮಾದರಿ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಪೊಲೀಸ್ ಭದ್ರತೆ; ಕಾಮಗಾರಿ ಸ್ಥಗಿತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ