ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಡಿ ಮತ್ತು ಸಿಬಿಐನಿಂದ ಪ್ರಜಾಪ್ರಭುತ್ವ ನಾಶವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು? ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ಐಟಿ ಹಾಗೂ ಸಿಬಿಐ ದಾಳಿ ನಡೆಸುತ್ತಿದೆ. ಇದರಿಂದ ಪ್ರಜಾ ಪ್ರಭುತ್ವ ನಾಶವಾಗುತ್ತಿದೆ ಎಂದು ಗುಡುಗಿದರು.
ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿವೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ಸಿಎಂ ರಾಜೀನಾಮೆ ಕೇಳಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ