Kannada NewsKarnataka News

*ಮಹಿಳೆಯ ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿದ ರಾಕ್ಷಸರು*

ಪ್ರಗತಿವಾಹಿನಿ ಸುದ್ದಿ: ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆಯುತ್ತಿದ್ದಾಳೆ ಎಂದು ಭಾವಿಸಿ ಮಹಿಳೆಯೊಬ್ಬರ ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ ಘಟನೆ ನಡೆದಿದೆ.

ರಾಜ್ಯವೇ ತಲೆ ತಗ್ಗಿಸುವಂತಹ ಘಟನೆ ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ಇಬ್ಬರನ್ನ ಬಂಧಿಸಲಾಗಿದ್ದು, 11 ಜನರ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಗಂಗೂಬಾಯಿ ಎಂಬ ಮಹಿಳೆಗೆ ಈ ರೀತಿ ಅವಮಾನಿಸಲಾಗಿದೆ. ಅ.16 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಸ್ತೂರಿಬಾಯಿ ಡಾಕಪ್ಪ ಮತ್ತು ಡಾಕಪ್ಪ ಚಿನ್ನಾರಾಠೋಡ ಬಂಧಿತ ಆರೋಪಿಗಳು.

ಇನ್ನುಳಿದಂತೆ ವಿಜಯಕುಮಾರ ಕಿಶನ್ ರಾಠೋಡ (ರೌಡಿ ಶೀಟ‌ರ್) ಮತ್ತು ಇತರೆ ಹತ್ತು ಮಂದಿ ಆರೋಪಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದ್ದು, ಮುಂಬೈ, ಪುಣೆಯಲ್ಲಿ ತಲೆ ಮರೆಸಿಕೊಂಡಿರುವ ಶಂಕೆ ಇದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

Home add -Advt

ಸಂತ್ರಸ್ತೆ ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿಯ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದಳು. ಆಕೆಯ ಅಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ. ಆದ್ರೆ ಆರೋಪಿಗಳು ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆಯುತ್ತಿದಾಳೆ ಎಂದು ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ.

ಸುಮಾರು 11 ಜನ ಗಂಗೂಬಾಯಿಯನ್ನ ಒದ್ದು ನೆಲಕ್ಕೆ ಕೆಡವಿದ್ದಾರೆ. ಆಕೆಯನ್ನ ಹಿಡಿದು ತಲೆಕೂದಲು ಕತ್ತರಿಸಿದ್ದಾರೆ. ನಂತರ ತಲೆಗೆ ಸುಣ್ಣ ಹಚ್ಚಿ, ಮೈಮೇಲೆ ಖಾರದಪುಡಿ ಹಾಕಿ ದುಷ್ಕೃತ್ಯ ಎಸಗಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.

ಇನ್ನುಳಿದ ವಿಜಯಕುಮಾರ್, ತಿಪ್ಪಣ್ಣ, ರಮೇಶ, ದೇವಿಭಾಯಿ, ತಿಪ್ಪಿಭಾಯಿ, ರೂಪ್ಲಿಭಾಯಿ, ಅನುಸೂಯಾ, ಚಾವಳಿಭಾಯಿ, ತಿಪ್ಪಣ್ಣ ನಾಯ್ಕ ಆರೋಪಿಗಳಿಗಾಗಿ ಕೆಂಭಾವಿ ಪೊಲೀಸರು ತೀವ ಹುಡುಕಾಟ ನಡೆಸಿದ್ದಾರೆ.‌

Related Articles

Back to top button