ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ.
ಮಾರ್ಚ್ ನಿಂದ ರಾಜ್ಯದಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. ಕಳೆದ 20 ದಿನಗಳಲ್ಲಿ 246 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಏಪ್ರಿಲ್ 17ರಿಂದ 23ರವರೆಗೆ ಒಟ್ಟು 82 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಅದರಲ್ಲಿ ಅತಿ ಹೆಚ್ಚು 49 ಕೇಸ್ ಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ವೈದ್ಯರು ಎಚ್ಚರಿಕೆ ನೀಡಿದ್ದು ಸರವಜನಿಕರು ಶುಚಿತ್ವದ ಕಡೆ ಗಮನ ಹರಿಸಬೇಕು. ಜ್ವರದಂತಹ ಲಕ್ಷಣ ಕಂಡುಬಂದರೆ ಟೆಸ್ಟಿಂಗ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ