Karnataka News

*ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ.

5 ವರ್ಷದ ಪ್ರದೀಪ್ ಆಚಾರಿ ಮೃತ ಬಾಲಕ. ಕೆಲ ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ಬಾಲಕ, ಚಿಕಿತ್ಸೆ ಫಲಿಸದೇಸಾವನ್ನಪ್ಪಿದ್ದಾನೆ.

Home add -Advt

ಕಳೆದ ಒಂದು ವಾರದಲ್ಲಿ ಸಿದ್ದಮ್ಮನ ಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದೆ. ಇದೀಗ ಬಾಲಕ ಪ್ರದೀಪ್ ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಗ್ರಾಮದಲ್ಲಿ ಡೆಂಗ್ಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಗ್ರಾಮದಲ್ಲಿ, ಮನೆಗಳ ಸುತ್ತ ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Back to top button