*ಮಹಾಮಾರಿ ಡೆಂಗ್ಯೂ ಸೋಂಕಿಗೆ ಯುವತಿ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದು, ಮಹಾಮಾರಿಗೆ 18 ವರ್ಷದ ಯುವತಿಯೊಬ್ಬರು ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ನಾಮಗೊಂಡ್ಲು ಗ್ರಾಮದ ನಿವಾಸಿ ಯಶಸ್ವಿನಿ (18) ಶಂಕಿತ ಡೆಂಗ್ಯೂಗೆ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಆರಂಭದಲ್ಲಿ ಗೌರಿಬಿದನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಾರೆ. ಡೆಂಗ್ಯೂ ಸೋಂಕಿನಿಂದಲೇ ಯುವತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.Home add -Advt … Continue reading *ಮಹಾಮಾರಿ ಡೆಂಗ್ಯೂ ಸೋಂಕಿಗೆ ಯುವತಿ ಸಾವು*