
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಸೋಂಕು ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 175 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.
ರಾಜ್ಯದಲ್ಲಿ ಈವರೆಗೆ 7000 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಶನಿವಾರ ಒಂದೇ ದಿನದಲ್ಲಿ 175 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 1908 ಪ್ರಕರಣಗಳು ದಾಖಲಾಗಿವೆ. ನಿನ್ನೆ ಒಂದೇ ದಿನದಲ್ಲಿ 127 ಜನರಲ್ಲಿ ಸೋಂಕು ದೃಢಪಟ್ಟಿದೆ. ವಿವಿಧ ಆಸ್ಪತ್ರೆಗಳಿಗೆ ಸೋಂಕಿತರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.