*ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ, ಆರೋಗ್ಯ ಇಲಾಖೆ ಅಧಿಕರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಡಿಸಿ, ಸಿಇಒ,ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. … Continue reading *ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ*