
ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಡೆಂಗ್ಯೂ ಅಟ್ಟಹಾಸಕ್ಕೆ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರೇಮ್ ಕುಮಾರ್ (13) ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವ ಬಾಲಕ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಪ್ರೇಮ್ ಕುಮಾರ್ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ.
ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಡೆಂಗ್ಯೂಗೆ ಬಾಲಕ ಬಲಿಯಾದ ಸುದ್ದಿ ತಿಳಿಯುತ್ತಿದ್ದಂತೆ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.