
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಕ್ಕಳು ಸೋಂಕಿಗೆ ಬಲಿಯಾಗುತ್ತಿದ್ದಾರೆ.
ಒಂದೇ ಜಿಲ್ಲೆಯಲ್ಲಿ ಕೇವಲ ಒಂದು ವಾರದಲ್ಲಿ ಮೂವರು ಮಕ್ಕಳು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯಲ್ಲಿ 11 ಮಕ್ಕಳು ಡೆಂಗ್ಯೂದಿಂದಾಗಿ ಐಸಿಯುಗೆ ದಾಖಲಾಗಿದ್ದಾರೆ.
ಹಾಸನ ಜಿಲ್ಲಾಸ್ಪತ್ರೆಯಲ್ಲಿ 48 ಡೆಂಗ್ಯೂ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 11 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಡೆಂಗ್ಯೂ ಸೋಂಕಿಗೆ ಮೂವರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ.