Kannada NewsLatestNational
*ರೆಪೋ ದರದಲ್ಲಿ ಬದಲಾವಣೆ ಇಲ್ಲ: ಶೇ. 5.25ರಲ್ಲಿ ಮುಂದುವರಿಕೆಗೆ ಆರ್ ಬಿಐ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಎಂಪಿಸಿ ಸಭೆಯು ರಿಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿದೆ.
ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಆರ್ ಬಿಐ ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಸಂಜ ಮಲ್ಹೋತ್ರಾ ತಿಳಿಸಿದ್ದಾರೆ.
ಬಡ್ಡಿದರವು ಶೇ. 5.25ರಲ್ಲಿ ಮುಂದುವರಿಯಲಿದೆ. 2026-27ರಲ್ಲಿ ಹಣದುಬ್ಬರ ಶೇ. 4.6 ಇರಬಹುದು ಎಂದು ಆರ್ಬಿಐ ಪ್ರೊಜೆಕ್ಟ್ ಮಾಡಿದೆ. ಮೊದಲ ಕ್ವಾರ್ಟರ್ನಲ್ಲಿ ಶೇ. 4, ಎರಡನೇ ಕ್ವಾರ್ಟರ್ನಲ್ಲಿ ಶೇ. 4.4, ಮೂರನೇ ಕ್ವಾರ್ಟರ್ನಲ್ಲಿ ಶೇ. 5.2, ನಾಲ್ಕನೇ ಕ್ವಾರ್ಟರ್ನಲ್ಲಿ ಶೇ. 4.7ರಷ್ಟು ಹಣದುಬ್ಬರ ಇರಬಹುದು ಎನ್ನುವುದು ಆರ್ಬಿಐ ಎಂಪಿಸಿಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.


