Latest

*ಡೆಂಗ್ಯೂ ಮಹಾಮಾರಿಗೆ 6 ವರ್ಷದ ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ: ವರುಣಾರ್ಭಟದ ನಡುವೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಾಮಾರಿ ಡೆಂಗ್ಯೂಗೆ 6 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಸಾನಿಯಾ (6) ಮೃತ ಬಾಲಕಿ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಬಾಲಕಿ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಡೆಂಗ್ಯು ದೃಢಪಟ್ಟ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಬಲಿಯಾಗುತ್ತಿದ್ದರೂ ಆರೋಗ್ಯ ಇಲಾಖೆ ಈ ಬಗ್ಗೆ ಗಂಭೀರವಾಗಿ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಮಗಳನ್ನು ಕಳೆದುಕೊಂಡಿರುವ ಪೋಷಕರು, ಕುಟುಂಬದವರು ಸರ್ಕಾರ, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt


Related Articles

Back to top button