
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಉಪವಿಭಾಗೀಯ ಆಸ್ಪತ್ರೆಯ ನೌಕರರೊಬ್ಬರು ಡೆಂಗ್ಯೂವಿನಿಂದ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.
ನಾಗರಾಜ್ (33) ಮೃತ ದುರ್ದೈವಿ. ತಾಳಗುಪ್ಪ ನಿವಾಸಿಯಾಗಿರುವ ನಾಗರಾಜ್ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸಿತ್ತುದ್ದರು.
ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ನಾಗರಾಜ್ ಮೊದಲು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
 
					 
				 
					 
					 
					 
					
 
					 
					 
					


