
ಪ್ರಗತಿವಾಹಿನಿ ಸುದ್ದಿ:ರಾಜ್ಯಾದ್ಯಂತ ಮಹಾಮಾರಿ ಡೆಂಗ್ಯೂ ಜ್ವರದ ಅಟ್ಟಹಾಸ ಹೆಚ್ಚುತ್ತಿದ್ದು, ನರ್ಸ್ ಓರ್ವರು ಡೆಂಗ್ಯೂ ಸೋಂಕಿಗೆ ಬಲಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ನರ್ಸ್ ಹೇಮಾ (45) ಮೃತರು. ಹೇಮಾ ಅವರು ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು.
ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ