
ಪ್ರಗತಿವಾಹಿನಿ ಸುದ್ದಿ: ಮಹಾಮಾರಿ ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದನೂರಿನ ಮಹಾತ್ಮಾನಗರ ಬಡಾವಣೆಯಲ್ಲಿ ನಡೆದಿದೆ.
19 ವರ್ಷದ ಹೇಮಾ ಮೃತ ವಿದ್ಯಾರ್ಥಿನಿ. ಹೇಮಾ ಪ್ರಥಮ ವರ್ಷದ ಬಿ.ಕಾಂ ಓದುತ್ತಿದ್ದಳು. ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹೇಮಾಗೆ ಡೆಂಗೂ ಡೃಢಪಟ್ಟಿತ್ತು. ಚಿಕಿತ್ಸೆ ಫಲಿಸದೇ ಹೇಮಾ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ