Latest

*ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿ ಮೊದಲ ಬಲಿ ಪಡೆದಿದೆ.

Home add -Advt

ಡೆಂಗ್ಯೂವಿನಿಂದ ಬಳಲುತ್ತಿದ್ದ ಹರೇರಾಮ್ ಗೋಪಾಲ್ ಭಟ್ ಎನ್ನುವವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಹರೇರಾಮ್ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿದ್ದರು.

ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಹರೇರಾಮ್ ಇದೀಗ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಡೆಂಗ್ಯೂ ಸೋಂಕಿನಿಂದ ಹರೇರಾಮ್ ಮೃತಪಟ್ಟಿದ್ದಾಗಿ ತಿಳಿದುಬಂದಿದೆ. ಮೃತ ಹರೇರಾಮ್ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೆರೆ ನಿವಾಸಿಯಾಗಿದ್ದರು.


Related Articles

Back to top button