Latest

*ಮಹಾಮಾರಿ ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರು ಬಳಿಕ ಹಾವೇರಿ ಜಿಲ್ಲೆ ಡೆಂಗ್ಯೂ ಪ್ರಕರಣದಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ಹಾವೇರಿಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ.

ಮಹಾಮಾರಿ ಡೆಂಗ್ಯೂಗೆ 30 ವರ್ಷದ ಗೌಸಿಯಾ ಎಂಬ ಮಹಿಳೆ ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಮಹಿಳೆಯನ್ನು ಮೊದಲು ನಗರದ ಪಂಡಿತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದಾರೆ.

ಡೆಂಗ್ಯೂನಿಂದಾಗಿಯೇ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ವೈದ್ಯರು ಈ ಬಗ್ಗೆ ದೃಢಪಡಿಸಿಲ್ಲ.

Home add -Advt

Related Articles

Back to top button