Latest

ನಾಳೆ ಪಂಜಾಬ್ ಸಿಎಂ ಭಗವಂತ್ ಮಾನ್ ಮದುವೆ; 2ನೇ ಬಾರಿ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಮುಖ್ಯಮಂತ್ರಿ

ಪ್ರಗತಿವಾಹಿನಿ ಸುದ್ದಿ; ಅಮೃತಸರ್: ಪಂಜಾಬ್ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ನಾಳೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

ಸಿಎಂ ಭಗವಂತ್ ಮಾನ್ ಅವರಿಗೆ ಇದು ಎರಡನೇ ವಿವಾಹವಾಗಿದ್ದು, ಚಂಡೀಗಢದ ತಮ್ಮ ಮನೆಯಲ್ಲಿ ನಾಳೆ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾಗಲಿದ್ದಾರೆ.

ಖಾಸಗಿ ಸಮಾರಂಭದಲ್ಲಿ ಭಗವಂತ್ ಮಾನ್ ಕುಟುಂಬ ಸದಸ್ಯರು ಹಾಗೂ ಆಪ್ತರು ಮಾತ್ರ ಭಾಗಿಯಾಗಲಿದ್ದಾರೆ. ಭಗವಂತ್ ಮಾನ್ ಮೊದಲನೇ ಪತ್ನಿ ಇಂದ್ರಜಿತ್ ಕೌರ್ ಅವರಿಗೆ 2016ರಲ್ಲಿ ವಿಚ್ಛೇದನ ನೀಡಿದ್ದರು. ಭಗವಂತ್ ಮಾನ್ ಹಾಗೂ ಇಂದದ್ರಜಿತ್ ಕೌರ್ ಅವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಮೊದಲ ಪತ್ನಿ ಹಾಗೂ ಮಕ್ಕಳು ಅಮೆರಿಕಾದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.

ಇದೀಗ 49ನೇ ವಯಸ್ಸಿನಲ್ಲಿ ಭಗವಂತ್ ಮಾನ್ ಎರಡನೇ ವಿವಾಹಕ್ಕೆ ಸಜ್ಜಾಗಿದ್ದು, ನಾಳೆ ಗುರುಪ್ರೀತ್ ಕೌರ್ ಅವರನ್ನು ವಿವಾಹವಾಗಲಿದ್ದಾರೆ. ವಿವಾಹ ಸಮಾರಂಭದಲ್ಲಿ ದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಹಾಗೂ ಆಪ್ ಮುಖಂಡರು ಭಾಗಿಯಾಗುವ ಸಾಧ್ಯತೆ ಇದೆ.
ಭಾರಿ ಮೇಘಸ್ಫೋಟ; ಏಕಾಏಕಿ ಪ್ರವಾಹ; 8 ಜನರು ನಾಪತ್ತೆ

Home add -Advt

Related Articles

Back to top button