Latest

ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಬಿಎಸ್ ವೈಗೆ ಶುರುವಾಯ್ತು ಸಂಕಷ್ಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಸಂಕಷ್ಟ ಶುರುವಾಗಿದೆ.

ಬೆಳ್ಳಂದೂರು ಬಳಿಯ ಜಮೀನು ಡಿನೋಟೀಫಿಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವ ರೆಡ್ಡಿ ಎಂಬುವವರು 2013ರಲ್ಲಿ ಖಾಸಗಿ ದೂರು ನೀಡಿದ್ದರು. ಲೋಕಾಯುಕ್ತ ವಿಶೇಷ ಕೋರ್ಟ್ ಕೂಡ ತನಿಖೆಗೆ ಆದೇಶ ನೀಡಿತ್ತು.

ಈ ಪ್ರಕರಣ ರದ್ದು ಕೋರಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ತ್ ಏಕಸದಸ್ಯ ಪೀಠ, ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಹೀಗಗೈ ಬಿ.ಎಸ್.ವೈಗೆ ಹಿನ್ನಡೆಯಾದಂತಾಗಿದೆ.

ಮಾಜಿ ಸಚಿವ ಆರ್.ವಿ.ದೇಶಪಾಂದೆ ವಿರುದ್ದವೂ ಈ ಪ್ರಕರಣ ದಾಖಲಾಗಿತ್ತು. ಆದರೆ ದೇಶಪಾಂಡೆ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿತ್ತು. ಈ ಹಿನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೂಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೀಕೋರ್ಟ್ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button