Latest

ಸಿಎಂ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಾಲಯ ತನಿಖೆ ಮುಂದುವರೆಸುವಂತೆ ಆದೇಶಿಸಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ತಿರಸ್ಕರಿಸಿರುವ ಲೋಕಾಯುಕ್ತ ನ್ಯಾಯಾಲಯ, ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆ ಮುಂದುವರೆಸುವಂತೆ ಡಿವೈಎಸ್ ಪಿಗೆ ಸೂಚನೆ ನೀಡಿದೆ.

ಬೆಳ್ಳಂದೂರು ಬಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವ ರೆಡ್ಡಿ ಎನ್ನುವವರು ಸಿಎಂ ಬಿಎಸ್ ವೈ ವಿರುದ್ಧ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಎಸ್ ವೈ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಎಫ್ ಐಆರ್ ಗೆ ತಡೆ ನೀಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ತನಿಖೆಗೆ ಆದೇಶಿಸಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button