Politics

*ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಕೇಂದ್ರದ ಅನುಮತಿ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ತಡೆ*

ಕೇಂದ್ರ ಸಚಿವರಾಗಿ ಹೆಚ್ ಡಿಕೆ ಸಹಿ ಹಾಕಿದ್ದ ಮೊದಲ ಫೈಲ್

ಪ್ರಗತಿವಾಹಿನಿ ಸುದ್ದಿ: ದೇವದಾರಿ ಬೆಟ್ಟದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ತಡೆ ನೀಡಿದ್ದಾರೆ.

ಬಳ್ಳಾರಿ ಜಿಲ್ಲೆಯ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ನೀಡಿದ ಬೆನ್ನಲ್ಲೇ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) ಗಣಿಗಾರಿಕೆಗೆ ಮುಂದಾಗಿತ್ತು. ಆದರೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಗೆ ಗಣಿಗಾರಿಕೆ ನಡೆಸದಂತೆ ಸೂಚಿದ್ದಾರೆ. ಅಲ್ಲದೇ ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವ ಪತ್ರಗಳಿಗೂ ಅಧಿಕಾರಿಗಳು ಸಹಿ ಹಾಕುವಂತಿಲ್ಲ ಎಂದು ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಈ ಹಿಂದೆ ಗಣಿಗಾರಿಕೆ ನಡೆಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ಗಣಿಗಾರಿಕೆ ನಿಯಮ ಉಲ್ಲಂಘನೆ ಮಾಡಿತ್ತು. ಸಿಇಸಿ, ಸಂಸ್ಥೆಗೆ ಅರಣ್ಯ ಅಭಿವೃದ್ಧಿ ಮಾಡುವಂತೆ ಸೂಚಿಸಿತ್ತು. ಆದರೆ ಸಿಇಸಿ ಆದೇಶವನ್ನೂ ಕುದುರೆಮುಖ ಸಂಸ್ಥೆ ಉಲ್ಲಂಘಿಸಿದೆ. ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಿದರೆ ಜಲಮೂಲಗಳು, ಅರಣ್ಯ ಸಂಪತ್ತು ನಾಶವಾಗುತ್ತವೆ ಎಂದು 2018ರಲ್ಲಿ ಕೇಂದ್ರ ಸರ್ಕಾರ ತಡೆ ನೀಡಿದೆ. ಈಗ 2023ರ ಏಪ್ರಿಲ್ ನಲ್ಲಿ ಕೆಲ ಷರತ್ತುಗಳ ಜೊತೆ ಅನುಮತಿ ನೀಡಲಾಗಿದೆ. ಅನುಮತಿ ಸಿಗುತ್ತಿದ್ದಂತೆ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ದೇವದಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಮುಂದಾಗಿತ್ತು. ಹಿಂದೆ ಹಲವು ನಿಯಮ ಉಲ್ಲಂಘನೆ ಆಗಿರುವುದರಿಂದ ಗಣಿಗಾರಿಕೆಗೆ ತಡೆ ನೀಡಿರುವುದಾಗಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button