Kannada NewsKarnataka NewsLatest

*32 ಪಿಡಿಒಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ನರೇಗಾ ಯೋಜನೆಯಲ್ಲಿ 150 ಕೋಟಿ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ತಾಲೂಕಿನ 32 ಪಿಡಿಒ ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

2020-2023ವರೆಗೆ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿರುವುದು ಲೆಕ್ಕಪರಿಶೋಧನೆ ವೇಳೆ ಬಯಲಾಗಿತ್ತು. ಪ್ರಕರನಸಂಬಂಧ ಕೆಲ ದಿನಗಳ ಹಿಂದೆ ದೇವದುರ್ಗ ಠಾಣೆಯಲ್ಲಿ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ನಾಲ್ಕು ಪಿಡಿಒ ಗಳನ್ನು ಅಮಾನತುಗೊಳಿಸಲಾಗಿತ್ತು.

ಇದೀಗ ಇದೇ ಪ್ರಕರಣ ಸಂಬಂಧ ದೇವದುರ್ಗ ತಾಲೂಕಿನ 32 ಪಿಡಿಒ ಗಳನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ತುಕಾರಾಂ ಆದೇಶ ಹೊರಡಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button