ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು.
ತಿಂಥಣಿ ಕನಕ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ, ನರಸೀಪುರ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ಕಾರ್ಣಿಕದ ನಾಗಪ್ಪಜ್ಜ ಉರ್ಮಿ, ದೇವರಗುಡ್ದದ ಕರಿಯಪ್ಪಜ್ಜ ಹಕಾರಿ ಅವರ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಶಿವಣ್ಣ ವಹಿಸಿದ್ದರು.
ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಉಪಸಭಾಪತಿಗಳಾದ ರುದ್ರಪ್ಪ ಮಾ.ಲಮಾಣಿ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಶಾಸಕರಾದ ಶ್ರೀನಿವಾಸ್ ಮಾನೆ , ಮಾಜಿ ಸಚಿವ ಶಂಕರ್, ನೆಹರೂ ಓಲೆಕಾರ್, ಗುಡ್ಡದಾಪುರ ಗ್ರಾ.ಪಂ.ಅಧ್ಯಕ್ಷರಾದ ದ್ಯಾಮವ್ವ ಮೈ ಸತಗಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ