Kannada NewsKarnataka NewsLatest

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

Home add -Advt

ಸಹೋದರಿಯ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಕಂಬನಿ ಮಿಡಿದಿದ್ದಾರೆ. ಇಂದು ಸಂಜೆ ಹೊಳೆನರಸಿಪುರದ ಬಸವನಾಯಕನಹಳ್ಳಿಯಲ್ಲಿ ಜವರಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.


Related Articles

Back to top button