*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಹೋದರಿಯ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಕಂಬನಿ ಮಿಡಿದಿದ್ದಾರೆ. ಇಂದು ಸಂಜೆ ಹೊಳೆನರಸಿಪುರದ ಬಸವನಾಯಕನಹಳ್ಳಿಯಲ್ಲಿ ಜವರಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಕೋರ್ಟ್ ಗೆ ಹಾಜರಾಗದೇ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ … Continue reading *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ವಿಧಿವಶ*
Copy and paste this URL into your WordPress site to embed
Copy and paste this code into your site to embed