Kannada NewsKarnataka NewsLatest

*ಹೆಚ್ಚಾದ ಮಳೆ ಅಬ್ಬರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮಳೆಯ ತೀವ್ರತೆ ಮುಂದುವರೆದಿದೆ. ಹಾಗಾಗಿ ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗೆ ‘ಆರೆಂಜ್ ಅಲರ್ಟ್‌’ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತು ವಿದ್ಯಾರ್ಥಿಗಳ ಜೀವಸುರಕ್ಷತೆಯ ಹಿತದೃಷ್ಟಿಯಿಂದ ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸ್ಥಳೀಯ ತಾಲೂಕು ಆಡಳಿತ ಹಾಗೂ ಜಿಲ್ಲಾಧಿಕಾರಿಗಳ ಸೂಚನೆಯಂತೆ ರಜೆ ಘೋಷಿಸಲಾಗಿದೆ. 

ತಗ್ಗು ಪ್ರದೇಶಗಳು ಮತ್ತು ನದಿಯಂಚಿನ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿರುವುದರಿಂದ, ಜನರು ಅನಗತ್ಯವಾಗಿ ಹೊರಗೆ ಬಾರದಂತೆ ಹಾಗೂ ಜಲಮೂಲಗಳ ಹತ್ತಿರ ಹೋಗದಂತೆ ತಾಲೂಕು ಆಡಳಿತ ಮನವಿ ಮಾಡಿದೆ. ಅಪಾಯಕಾರಿ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸ್ಥಳೀಯ ಪಂಚಾಯತ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸೂಕ್ತ ಸಿದ್ಧತೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button