Belagavi NewsBelgaum NewsKannada NewsKarnataka NewsLatest

ಅಭಿವೃದ್ದಿ ಯೋಜನೆ: ಡಿ.ಕೆ.ಶಿವಕುಮಾರ್ ಜೊತೆ ಚನ್ನರಾಜ ಹಟ್ಟಿಹೊಳಿ ಚರ್ಚೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಬೆಂಗಳೂರಿನಲ್ಲಿ‌  ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರನ್ನು‌ ಭೇಟಿ ಮಾಡಿ, ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ನೀರಾವರಿ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.

  ಉಪ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ವಿವಿಧ ಯೋಜನೆಗಳಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು ಎಂದು ಚನ್ನರಾಜ ತಿಳಿಸಿದ್ದಾರೆ.

Home add -Advt

ಈ ವೇಳೆ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕ ಎನ್.ಎಚ್. ಕೋನರೆಡ್ಡಿ ಉಪಸ್ಥಿತರಿದ್ದರು.

Related Articles

Back to top button