Election NewsKannada NewsKarnataka NewsNationalPolitics
*ಮಹಾರಾಷ್ಟ್ರದ ನೂತನ ಸಿಎಂ ಆಗಿ ‘ದೇವೇಂದ್ರ ಫಡ್ನವಿಸ್ ‘ ಆಯ್ಕೆ*
ಪ್ರಗತಿವಾಹಿನಿ ಸುದ್ದಿ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ನಡೆದ ಬಿಜೆಪಿ ಕೋರ್ ಕಮಟಿ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಹೆಸರು ಅಂತಿಮವಾಗಿದೆ.
ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ನಾಳೆ ಡಿಸೆಂಬರ್ 5ರಂದು ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸದ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ನಂತರ ಮಹಾಯುತಿಯ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ