ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ, ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಮುಂಬೈನ ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ವೇಳೆ ನೂಕು ನುಗ್ಗಲು ಉಂಟಾಗಿದೆ. ಬಿಜೆಪಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮುಂಬೈ ಪೊಲೀಸರು ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ.
ಮಹಾರಾಷ್ಟ್ರ ಅಲ್ಪಸಂಖ್ಯಾತ ಅಭಿವೃದ್ಧಿ ಖಾತೆ ಸಚಿವ ನವಾಬ್ ಮಲಿಕ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರರೊಂದಿಗೆ ಆಸ್ತಿ ವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈಗಾಗಲೇ ಇಡಿ ಅಧಿಕಾರಿಗಳು ನವಾಬ್ ಮಲಿಕ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಫಡ್ನವಿಸ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬಜೆಟ್ ಮಂಡನೆಗೆ ಸಗಣಿ ಸೂಟ್ ಕೇಸ್ ಹಿಡಿದು ಬಂದ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ