Kannada NewsKarnataka NewsLatest

*ನಿಪ್ಪಾಣಿಯಲ್ಲಿ ಪ್ರಚಾರಸಭೆಯಲ್ಲಿ ಭಾಗಿಯಾಗಲಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಫಡ್ನವಿಸ್*

ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿಯಿದ್ದು, ಮತದಾರರ ಮನಗೆಲ್ಲಲು ಅಭ್ಯರ್ಥಿಗಳು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ ಪರ ಮತಯಾಚನೆಗೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ನಾಳೆ ಆಗಮಿಸಲಿದ್ದಾರೆ.

Home add -Advt

ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ ಪರ ಭಾನುವಾರ ಮೇ 7ರಂದು ಇಲ್ಲಿನ ಮುನಿಸಿಪಲ್ ಪ್ರೌಢಶಾಲೆಯ ಆವರಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಪ್ರಚಾರ ಸಭೆಯಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಉಪಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಪಾಲ್ಗೊಳ್ಳಲಿದ್ದಾರೆ.

ಈ ಸಭೆಯಲ್ಲಿ ಕ್ಷೇತ್ರದ ಎಲ್ಲ ಕಾರ್ಯಕರ್ತರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆ ಮೂಲಕ ತಿಳಿಸಲಾಗಿದೆ.


https://pragati.taskdun.com/rahul-gandhibelagaviyamakanamaradichikkodicampaign/

Related Articles

Back to top button